ಯಾಣ, ಭಾರತ
ಯಾಣ ದಟ್ಟವಾದ ಕಲ್ಲು ಬಂಡೆ ಅರಣ್ಯ ಪ್ರದೇಶದಿಂದ ಕೂಡಿದ ಹಳ್ಳಿ. ಇದು ಕುಮಟಾ ತಾಲೂಕು ಉತ್ತರಕನ್ನಡ ಜಿಲ್ಲೆಗೆ ಸೇರುತ್ತದೆ. ಇದು ಉತ್ತರ ಕನ್ನಡ ಜಿಲ್ಲೆಯ ಪ್ರಮುಖ ಪ್ರೇಕ್ಷಣೀಯ ಸ್ಥಳಗಳಲ್ಲೊಂದು. ಪಶ್ಚಿಮ ಘಟ್ಟಗಳ ಸಹ್ಯಾದ್ರಿ ಶ್ರೇಣಿಗಳಿಂದ ಕೂಡಿದೆ. ಇದು ಸಿರ್ಸಿ ಇಂದ ೪೫ ಕಿ.ಮಿ. ದೂರದಲ್ಲಿದೆ. ಕುಮಟಾದಿಂದ ೩೧ ಕಿಲೋಮೀಟರ್ ದೂರದಲ್ಲಿದೆ. ಕಾರವಾರದಿಂದ ೯೦ ಕಿಲೋಮೀಟರ್ ದೂರದಲ್ಲಿದೆ. ಅಂಕೋಲಾದಿಂದ ೫೬ ಕಿಲೋಮೀಟರ್ ಇದೆ. ಯಾಣದ ಪ್ರಮುಖವಾದ ಆಕರ್ಷಣೆ ಎಂದರೆ ಭೈರವೇಶ್ವರ ಶಿಖರ ಮತ್ತು ಮೊಹಿನಿ ಶಿಖರ ಈ ಎರಡು ಶಿಖರಗಳು ಕಡಿದಾದ ಕಪ್ಪು ಕಲ್ಲಿನಿಂದ ಕೂಡಿದೆ. ಭೈರವೇಶ್ವರ ಶಿಖರವು ೧೨೦ ಮೀಟರ್(೩೯೦ಅಡಿ) ಎತ್ತರವಿದೆ. ಮೋಹಿನಿ ಶಿಖರವು ೯೦ ಮೀಟರ್ (೩೦೦ಅಡಿ) ಎತ್ತರವಿದೆ. ಯಾಣದ ಶಿಖರ (ದೇವಾಲಯ) ವೆಂದು ಕರೆಯಲ್ಪಡುವ ಹಿರಿಬಂಡೆ ೧೨೦ ಮೀಟರ್ ಎತ್ತರವಾದ ಸುಮಾರು ಅಷ್ಟೇ ಅಗಲವಾದ ನೆಲಮುಗಿಲನ್ನು ಜೋಡಿಸುವ ಕಪ್ಪು ಪರದೆಯಂತೆ ಬೃಹದಾಕಾರದ ಶಿಲಾ ರೂಪವಾಗಿದೆ. ಈ ಬಂಡೆಯ ಮಧ್ಯದಲ್ಲಿ ಸೀಳು ಇದ್ದು ನೆತ್ತಿಯ ಮೇಲೆ ಜಲ ಸಂಚಯವಿದೆ. ಈ ಬಂಡೆಯ ಸೀಳಿನ ಗುಹೆಯಲ್ಲಿ ತಾನಾಗಿ ಮೂಡಿನಿಂತ ಭೈರವೇಶ್ವಲಿಂಗ ಎರಡು ಮೀಟರ್ ಎತ್ತರವಾಗಿದೆ. ಈ ಲಿಂಗದ ಮೇಲೆ ಸದಾ ಅಂಗುಲ ಗಾತ್ರದ ನೀರು ಮೇಲಿನಿಂದ ಒಸರುತ್ತಿರುತ್ತದೆ. ಸ್ಕಂದಪುರಾಣದಲ್ಲಿ ಯಾಣದ ಕತೆ ನಿರೂಪಿತವಾಗಿದೆ. ಭಸ್ಮಾಸುರ ಈಶ್ವರನಿಂದ ಉರಿಹಸ್ತದ ವರಮೊಹಿನಿ ಶಿಖರ ಈ ಎರಡು ಶಿಖರಗಳು ಕಡಿದಾದ ಕಪ್ಪು ಕಲ್ಲಿನಿಂದ ಕೂಡಿದೆ. ಭೈರವೇಶ್ವರ ಶಿಖರವು ೧೨೦ ಮೀಟರ್(೩೯೦ಅಡಿ) ಎತ್ತರವಿದೆ. ಮೋಹಿನಿ ಶಿಖರವು ೯೦ ಮೀಟರ್ (೩೦೦ಅಡಿ) ಎತ್ತರವಿದೆ. ಯಾಣದ ಶಿಖರ (ದೇವಾಲಯ) ವೆಂದು ಕರೆಯಲ್ಪಡುವ ಹಿರಿಬಂಡೆ ೧೨೦ ಮೀಟರ್ ಎತ್ತರವಾದ ಸುಮಾರು ಅಷ್ಟೇ ಅಗಲವಾದ ನೆಲಮುಗಿಲನ್ನು ಜೋಡಿಸುವ ಕಪ್ಪು ಪರದೆಯಂತೆ ಬೃಹದಾಕಾರದ ಶಿಲಾ ರೂಪವಾಗಿದೆ. ಈ ಬಂಡೆಯ ಮಧ್ಯದಲ್ಲಿ ಸೀಳು ಇದ್ದು ನೆತ್ತಿಯ ಮೇಲೆ ಜಲ ಸಂಚಯವಿದೆ. ಈ ಬಂಡೆಯ ಸೀಳಿನ ಗುಹೆಯಲ್ಲಿ ತಾನಾಗಿ ಮೂಡಿನಿಂತ ಭೈರವೇಶ್ವಲಿಂಗ ಎರಡು ಮೀಟರ್ ಎತ್ತರವಾಗಿದೆ. ಈ ಲಿಂಗದ ಮೇಲೆ ಸದಾ ಅಂಗುಲ ಗಾತ್ರದ ನೀರು ಮೇಲಿನಿಂದ ಒಸರುತ್ತಿರುತ್ತದೆ. ಸ್ಕಂದಪುರಾಣದಲ್ಲಿ ಯಾಣದ ಕತೆ ನಿರೂಪಿತವಾಗಿದೆ. ಭಸ್ಮಾಸುರ ಈಶ್ವರನಿಂದ ಉರಿಹಸ್ತದ ವರ ಪಡೆದು ಕೊನೆಗೆ ಈಶ್ವರನನ್ನೇ ಸುಡುವುದಾಗಿ ಅಟ್ಟಿಸಿಕೊಂಡು ನಡೆದಾಗ ಭೈರವೇಶ್ವರನ ರಕ್ಷಣೆಗಾಗಿ ಮಹಾವಿಷ್ಣುವು ಮೋಹಿನಿಯಾಗಿ ಬಂದು ಭಸ್ಮಾಸುರನನ್ನು ಒಲಿಸಿ ಕುಣಿಸಿ ಅವನ ಹಸ್ತವನ್ನೆ ಅವನ ತಲೆಯ ಮೇಲಿರಿಸುವಂತೆ ಮಾಡಿ ಭಸ್ಮಾಸುರನನ್ನು ಭಸ್ಮ ಮಾಡಿದ ಸ್ಥಳವಿದೆಂದು ಪ್ರತೀತಿ. ಶಿವರಾತ್ರಿಯ ದಿನ ಇಲ್ಲಿ ಪೂಜೆ ಸಲ್ಲಿಸಿ ದಂಡಿತೀರ್ಥದ ನೀರನ್ನು ತಂದು ಗೋಕರ್ಣದ ಮಹಾಬಲೇಶ್ವರನಿಗೆ ಅರ್ಪಿಸಿದರೆ ಪುಣ್ಯವೆಂಬ ನಂಬಿಕೆ ಇದೆ.
Praveen S Joglekar
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ